ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದ ಸುಪ್ರೀಂ ತೀರ್ಪು ಬಗ್ಗೆ ಪ್ರತಿಕ್ರಿಯಿಸಿದ ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ ಹಾಗೂ ಜೀವಬೆದರಿಕೆಯೊಡ್ಡಿದ ಪ್ರಕರಣ ಸಂಬಂಧ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿದೆ.
ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂಬುವವರನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪನ್ನು ಮೆಚ್ಚಿ ನಟಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳು ಎಂಬ ಅಕೌಂಟ್‌ನಿಂದ ನಟಿಗೆ ಅಶ್ಲೀಲ ಸಂದೇಶ ಹಾಗೂ ಜೀವಬೆದರಿಕೆಯನ್ನು ಹಾಕಿದ್ದಾರೆ. ಅದನ್ನು ನಟಿ ತನ್ನ ಇನ್‌ಸ್ಟಾಗ್ರಾಂ ಸ್ಟೋರಿನಲ್ಲಿ ಹಂಚಿಕೊಂಡಿದ್ದರು. ಅದಲ್ಲದೆ ಪೊಲೀಸ್ ಕಮಿಷನರ್‌ಗೆ 43ಅಕೌಂಟ್‌ಗಳ ವಿರುದ್ಧ ದೂರನ್ನು ನೀಡಿದ್ದರು.
ರಮ್ಯಾ ನೀಡಿದ ದೂರಿನ ಅನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯ ಸೆಕ್ಷನ್‍ಗಳಾದ 2023ರ 351(2), 351(3), 352, 75(1) 75(1)(Iಗಿ) ಹಾಗೂ 79 ಅಡಿಯಲ್ಲಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಬಳಿಕ ಓಬಣ್ಣ, ಗಂಗಾಧರ್, ರಾಜೇಶ್, ಭುವನ್‍ಗೌಡ, ಮಂಜುನಾಥ್, ಪ್ರಮೋದ್ ಗೌಡ ಹಾಗೂ ಸಂತೋಷ್ ಎಂಬ ಏಳು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತಿಬ್ಬರನ್ನು ಬಂಧಿಸಲಾಗಿದೆ.