Select Your Language

Notifications

webdunia
webdunia
webdunia
webdunia

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Tollywood actor Vijay Devarakonda, executive director, online betting app

Sampriya

ಹೈದರಾಬಾದ್ , ಗುರುವಾರ, 10 ಜುಲೈ 2025 (14:20 IST)
Photo Credit X
ಹೈದರಾಬಾದ್: ಟಾಲಿವುಡ್‌ ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಶ್ರೀಲೀಕಾ, ಪ್ರಣೀತಾ ಸುಭಾಷ್ ಸೇರಿದಂತೆ ಹಲವು ಮಂದಿಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ.

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 29 ಮಂದಿ ಸಿನಿಮಾ ನಟ-ನಟಿಯರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣದ ದಾಖಲಿಸಿದೆ. ಅವರೊಂದಿಗೆ ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್‌, ಯುಟ್ಯೂಬರ್‌ಗಳು ಈ ಪಟ್ಟಿಯಲ್ಲಿದ್ದಾರೆ.

ಅಕ್ರಮ ಬೆಟ್ಟಿಂಗ್​ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಅವರು ವ್ಯಾಪಕವಾಗಿ ಪ್ರಚಾರ ಮಾಡಿದ್ದು, ಪ್ರಚಾರ ಮಾಡಲು ಭಾರಿ ಕಮಿಷನ್ ಮತ್ತು ಸಂಭಾವನೆ ಪಡೆದಿದ್ದಾರೆ ಎಂದು ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಕ್ರಮ ಬೆಟ್ಟಿಂಗ್‌ನಿಂದಾಗಿ ಸಾಲದ ಹೊರೆಯಿಂದ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೈದರಾಬಾದ್​ ಪೊಲೀಸರು ಈಗಾಗಲೇ ಎಫ್‌ಐಆರ್‌ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ. ಹೈದರಾಬಾದ್ ಮತ್ತು ಸೈಬರಾಬಾದ್ ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ಪ್ರಕರಣ ದಾಖಲಿಸಿದೆ.

ಸೆಲೆಬ್ರಿಟಿಗಳಾದ ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್, ಪ್ರಣೀತಾ ಸುಭಾಷ್, ನಿಧಿ ಅಗರ್ವಾಲ್, ಶ್ರೀಮುಖಿ, ರಿತು ಚೌಧರಿ, ಆ್ಯಂಕರ್ ಶ್ಯಾಮಲಾ, ಅನನ್ಯ ನಾಗಲ್ಲ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನೀತು ಅಗರ್ವಾಲ್, ವಿಷ್ಣು ಪ್ರಿಯಾ, ವರ್ಷಿಣಿ, ಸಿರಿ ಹನುಮಂತು, ವಸಂತಿ ಕೃಷ್ಣನ್, ಶೋಭಾ ಶೆಟ್ಟಿ, ಅಮೃತ ಚೌಧರಿ, ನಯನಿ ಪಾವನಿ, ನೇಹಾ ಪಠಾಣ್, ಪದ್ಮಾವತಿ, ಪಾಂಡು, ಇಮ್ರಾನ್ ಖಾನ್, ಹರ್ಷ ಸಾಯಿ, ಬಯ್ಯ ಸನ್ನಿ ಯಾದವ್, ಟೇಸ್ಟಿ ಸುಪ್ರೇಜಾ ಸೇರಿ ಕೆಲವು ಯೂಟ್ಯೂಬರ್‌ಗಳ ವಿರುದ್ಧವೂ ಇಡಿ ಪ್ರಕರಣ ದಾಖಲಿಸಿದೆ.

ಇವರು ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಾದ ಜಂಗಲ್‌ ರಮ್ಮಿ, ಜೀತ್‌ವಿನ್‌, ಲೋಟಸ್‌365 ಸೇರಿದಂತೆ ಹಲವು ಆ್ಯಪ್‌ಗಳ ಪರ ಪ್ರಚಾರ ನಡೆಸಿದ್ದಾರೆ. ಇದಕ್ಕಾಗಿ ಹಣ ಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು