Publish Date: Fri, 12 Feb 2021 (09:07 IST)
Updated Date: Fri, 12 Feb 2021 (09:10 IST)
ಬೆಂಗಳೂರು: ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ತಾಯಿ ಪಾತ್ರಗಳಿಂದಲೇ ಮಿಂಚುತ್ತಿರುವ ನಟಿ ಪದ್ಮಜಾ ರಾವ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ.
ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ಪಡೆದಿದ್ದ ಸಾಲ ಪಾವತಿಗೆ 40 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಇದು ಬೌನ್ಸ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಟ, ವೀರೇಂದ್ರ ಶೆಟ್ಟಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂಬಂಧ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದರೂ ನಿರಾಕರಿಸಿದ್ದರು. ಹೀಗಾಗಿ ಈಗ ಮಂಗಳೂರಿನ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.