Select Your Language

Notifications

webdunia
webdunia
webdunia
webdunia

ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದ ಬಗ್ಗೆ ವೈದ್ಯ ಡಾ. ನರೇಶ್ ಶೆಟ್ಟಿ ಹೇಳಿದ್ದಿಷ್ಟು

ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದ ಬಗ್ಗೆ ವೈದ್ಯ ಡಾ. ನರೇಶ್ ಶೆಟ್ಟಿ ಹೇಳಿದ್ದಿಷ್ಟು
ಬೆಂಗಳೂರು , ಗುರುವಾರ, 18 ಮೇ 2017 (14:48 IST)
ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.  ಕಳೆದ ಮೂರ್ನಾಲ್ಕು ದಿನಗಳಿಂದ  ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಜೊತೆ ವೈದ್ಯ ಡಾ. ನರೇಸ್ ಶೆಟ್ಟಿ ಸುದ್ದಿಗೋಷ್ಠಿ ನಡೆಸಿ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದರು.

ಉಸಿರಾಟದ ತೊಂದರೆ ಇರುವುದರಿಂದ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದ್ದು, ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್ ತೆಗೆದ ಬಳಿ ಡಯಾಲಿಸಿಸ್ ಸೇರಿದಂತೆ ಇತರೆ ಚಿಕಿತ್ಸೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯ ಕೊಂಚ ಗಂಭೀರವಾಗಿದೆ. ಆದರೆ, ಯಾವುದೇ ವದಂತಿ ಹರಡಿಸದಂತೆ ವೈದ್ಯ ನರೇಶ್ ಶೆಟ್ಟಿ ಮನವಿ ಮಾಡಿದರು. ಪ್ರತೀ ಬುಲೆಟಿನ್`ನಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡುವುದಾಗಿ ವೈದ್ಯರು ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಾರ್ವತಮ್ಮ ರಾಜಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಪುತ್ರರ ಭೇಟಿ