ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಇಂದು ದರ್ಶನ್ ಹುಟ್ಟುಹಬ್ಬದ ದಿನವೇ ನಿರಾಸೆಯಾಗಿದೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2 ಆರೋಪಿ. ಸದ್ಯಕ್ಕೆ ಇಬ್ಬರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇಂದು ದರ್ಶನ್ ಹುಟ್ಟುಹಬ್ಬ. ತಮ್ಮ ಹುಟ್ಟುಹಬ್ಬವನ್ನು ಅವರು ಜೈಲಿನಲ್ಲಿಯೇ ಆಚರಿಸುವಂತಾಗಿದೆ.
ಇದರ ನಡುವೆ ಪವಿತ್ರಾ ಗೌಡಗೂ ಇಂದು ಕೋರ್ಟ ಬಿಗ್ ಶಾಕ್ ಕೊಟ್ಟಿದೆ. ಮಧ್ಯಂತರ ಜಾಮೀನಿಗಾಗಿ ಪವಿತ್ರಾ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ಕೋರ್ಟ್ ತಳ್ಳಿ ಹಾಕಿದೆ. ಮಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ಜೊತೆಗಿರಲು ಜಾಮೀನು ನೀಡಿ ಎಂದು ಪವಿತ್ರಾ ಕೋರ್ಟ್ ಮೊರೆ ಹೋಗಿದ್ದರು.
ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಪವಿತ್ರಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದ ಪವಿತ್ರಾಗೆ ನಿರಾಸೆಯಾಗಿದೆ. ಸದ್ಯಕ್ಕೆ ಆಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಶಿಕ್ಷೆ ಮುಂದುವರಿಸಬೇಕಿದೆ. ಇದೀಗ ಪ್ರಕರಣ ವಿಚಾರಣೆ ಹಂತದಲ್ಲಿದೆ.