ದರ್ಶನ್ ಗೆ ಆಯ್ತು, ನನಗೆ ಯಾವಾಗ ಅಂತ ಕೇಳ್ತೀದ್ದಾರಂತೆ ಪವಿತ್ರಾಗೌಡ

Krishnaveni K
ಬುಧವಾರ, 30 ಅಕ್ಟೋಬರ್ 2024 (14:12 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಈಗ ಅನಾರೋಗ್ಯದ ಹಿನ್ನಲೆಯಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದಕ್ಕೆ ಎ1 ಆರೋಪಿ ಪವಿತ್ರಾ ಗೌಡ ಪ್ರತಿಕ್ರಿಯೆ ಹೇಗಿತ್ತು ಎನ್ನುವುದು ಈಗ ಬಹಿರಂಗವಾಗಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾದರೆ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರೆ ಪವಿತ್ರಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ತನ್ನಿಂದಾಗಿಯೇ ದರ್ಶನ್ ಗೆ ಈ ಗತಿ ಬಂತು ಎಂದು ಪವಿತ್ರಾ ಈ ಹಿಂದೆ ಕಣ್ಣೀರು ಹಾಕಿದ್ದರು ಎಂಬ ವಿಚಾರ ತಿಳಿದುಬಂದಿತ್ತು.

ಇದೀಗ ದರ್ಶನ್ ಗೆ ಮಧ್ಯಂತರ ಜಾಮೀನು ಸಿಕ್ಕ ವಿಚಾರ ತಿಳಿದ ತಕ್ಷಣ ಪವಿತ್ರಾ ಫುಲ್ ಖುಷಿಯಾಗಿಬಿಟ್ಟರಂತೆ. ದರ್ಶನ್ ಗೆ ಜಾಮೀನು ಸಿಕ್ಕ ಸುದ್ದಿ ತಿಳಿದ ಬೆನ್ನಲ್ಲೇ ಸಹ ಖೈದಿಗಳೊಂದಿಗೆ ಪವಿತ್ರಾ ಸಂತಸ ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲ, ದರ್ಶನ್ ಗೆ ಬೇಲ್ ಆಯ್ತು ನನಗೆ ಯಾವಾಗ ಸಿಗುತ್ತೋ ಎಂದು ಹೇಳಿಕೊಂಡಿದ್ದಾರಂತೆ.

ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಬ್ಯಾರಕ್ ನಲ್ಲಿರುವ ಪವಿತ್ರಾ ಗೌಡ, ಈಗ ದರ್ಶನ್ ಗೆ ಜಾಮೀನು ಸಿಕ್ಕಿರುವ ಕಾರಣ ತನಗೂ ಸಿಗಬಹುದು ಎಂಬ ಭರವಸೆಯಲ್ಲಿದ್ದಾರಂತೆ. ಇತ್ತ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಭೇಟಿಗೆ ವಿಜಯಲಕ್ಷ್ಮಿ ಬಂದಿದ್ದು, ಪತ್ನಿಯನ್ನು ಕಂಡು ದರ್ಶನ್ ಖುಷಿಯಿಂದಲೇ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ಮುಂದಿನ ಸುದ್ದಿ
Show comments