Publish Date: Sun, 09 May 2021 (10:12 IST)
Updated Date: Sun, 09 May 2021 (10:14 IST)
ಹೈದರಾಬಾದ್: ಕೊರೋನಾ ಸೋಂಕಿಗೊಳಗಾಗಿದ್ದ ಟಾಲಿವುಡ್ ನಟ ಪವನ್ ಕಲ್ಯಾಣ್ ಚೇತರಿಸಿಕೊಂಡಿದ್ದಾರೆ. ಮನೆಯಲ್ಲಿಯೇ ಕ್ವಾರಂಟೈನ್ ಗೊಳಗಾಗಿದ್ದ ಪವನ್ ಈಗ ಚೇತರಿಸಿಕೊಂಡಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ತಕ್ಷಣವೇ ಅವರು ಮನೆಯಲ್ಲಿಯೇ ಪ್ರತ್ಯೇಕಿತರಾಗಿದ್ದರು. ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. 20 ದಿನಗಳ ಬಳಿಕ ಇದೀಗ ಅವರು ಮತ್ತೆ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಬಂದಿದೆ.
ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಹಂಚಿಕೊಂಡಿರುವ ನಟ, ನನ್ನ ಚೇತರಿಕೆಗಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.