Select Your Language

Notifications

webdunia
webdunia
webdunia
webdunia

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ನಟ ಪವನ್ ಕಲ್ಯಾಣ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ನಟ ಪವನ್ ಕಲ್ಯಾಣ್
ಮಂಗಳೂರು , ಮಂಗಳವಾರ, 29 ಮಾರ್ಚ್ 2022 (16:57 IST)
ಮಂಗಳೂರು: ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಇಂದು ದಕ್ಷಿಣ ಕನ್ನಡದ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ತಮ್ಮ ಸಂಗಡಿಗರೊಂದಿಗೆ ಕುಕ್ಕೆಗೆ ಬಂದಿದ್ದ ಪವನ್ ಕಲ್ಯಾಣ್ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಸನ್ಮಾನಿಸಿತು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ನಾಗದೋಷ ನಿವಾರಣೆಗಾಗಿ ಆಶ್ಲೇಷ ಬಲಿ ಸೇವೆಗೆ ಹೆಸರುವಾಸಿಯಾಗಿದೆ. ಅನೇಕ ಸೆಲೆಬ್ರಿಟಿಗಳು ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಲೇ ಇರುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ