ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ಪ್ರಿಯಾಮಣಿ ಕೂಡ ಒಬ್ಬರು. ತಮಿಳು, ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಇವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ.
ಇತ್ತೀಚೆಗೆ ಅವರು ತಮ್ಮ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಕಪ್ಪು ಉಡುಪಿನಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉತ್ತಮವಾಗಿ ಕಾಮೆಂಟ್ ಮಾಡಿದ್ದರು. ಆದರೆ ಅದರಲ್ಲಿ ಒಬ್ಬ ವ್ಯಕ್ತಿ ಅವರ ಬೆತ್ತಲೆ ಚಿತ್ರವನ್ನು ಹಂಚಿಕೊಳ್ಳುವಂತೆ ಕೇಳಿದ್ದಾನೆ.
ಇದಕ್ಕೆ ಪ್ರತಿಕ್ರಿಯಿಸಿದ ನಟಿ ಪ್ರಿಯಾಮಣಿ, ಮೊದಲು ನಿಮ್ಮ ಸಹೋದರಿ ಅಥವಾ ತಾಯಿಯ ಬಳಿ ಪೋಸ್ಟ್ ಮಾಡಲು ಹೇಳು ಅವರ ಬಳಿಕ ನಾನು ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಆಗ ಆತ ಕ್ಷಮೆ ಕೇಳಿದ್ದಾನೆ ಎನ್ನಲಾಗಿದೆ.