Webdunia - Bharat's app for daily news and videos

Install App

ನಟ ದರ್ಶನ್ ಜೈಲು ರಾಜಾತಿಥ್ಯಕ್ಕೆ ಬ್ರೇಕ್ ಹಾಕಲು ತಕ್ಕ ಪ್ಲ್ಯಾನ್ ರೆಡಿ

Krishnaveni K
ಸೋಮವಾರ, 26 ಆಗಸ್ಟ್ 2024 (12:14 IST)
ಬೆಂಗಳೂರು: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಬಗ್ಗೆ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಈಗ ತಕ್ಕ ಪ್ಲ್ಯಾನ್ ಮಾಡಲಾಗಿದೆ.

ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಟ್ರೀಟ್ ಮೆಂಟ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೈಲಿನಲ್ಲೇ ಅವರಿಗೆ ಗುಂಡು, ತುಂಡು ಎಲ್ಲವೂ ಸರಬರಾಜು ಆಗುತ್ತಿದೆ. ಬೇಕಾದಾಗ ಸಿಗರೇಟು ಸಿಗುತ್ತಿದೆ. ಅಂತೂ ಜೈಲಲ್ಲಿ ರೆಸಾರ್ಟ್ ರೀತಿಯಲ್ಲಿ ಕಾಲ ಕಳೆಯುತ್ತಿದ್ದಾರೆ ಎಂಬ ಆರೋಪ ಬಂದಿದೆ.

ಅದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ಫೋಟೋವೊಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಗೃಹಸಚಿವ ಜಿ ಪರಮೇಶ್ವರ್ ಕೆಲವು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ತನಿಖೆಗೆ ಆದೇಶಿಸಿದ್ದಾರೆ. ಈ ನಡುವೆ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗದಂತೆ ಮಾಡಲು ಈಗ ತಕ್ಕ ಪ್ಲ್ಯಾನ್ ಮಾಡಲಾಗುತ್ತಿದೆ ಎನ್ನಲಾಗಿದೆ.

ದರ್ಶನ್ ಗೆ ರಾಜಾತಿಥ್ಯ ನೀಡಲು ಸಹಾಯ ಮಾಡುತ್ತಿದ್ದುದು ರೌಡಿ  ವಿಲ್ಸನ್ ಗಾರ್ಡನ್ ನಾಗ. ಒಂದೋ ಆತನಿಗೆ ಇಲ್ಲಿ ಸಾಕಷ್ಟು ಸಹಾಯ ದೊರೆಯುತ್ತಿದ್ದು ಆ ಕಾರಣಕ್ಕೆ ಆತನನ್ನೇ ಬೇರೆ ಜೈಲಿಗೆ ಶಿಫ್ಟ್ ಮಾಡಲು ಚಿಂತನೆ ನಡೆದಿದೆ. ಇಲ್ಲದೇ ಹೋದಲ್ಲಿ ದರ್ಶನ್ ರನ್ನೇ ಬೇರೆ ಜೈಲಿಗೆ ಶಿಫ್ಟ್ ಮಾಡಬಹುದಾಗಿದೆ. ಇಂದು ಸಂಜೆಯೊಳಗೆ ಈ ಬಗ್ಗೆ ತೀರ್ಮಾನವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಮುಂದಿನ ಸುದ್ದಿ
Show comments