Webdunia - Bharat's app for daily news and videos

Install App

ಬಾಲಿವುಡ್‌ ನಟ ಸಲ್ಮಾನ್‌ ಮೇಲೆ ದಾಳಿಗೆ ಸಂಚು: ನಾಲ್ವರನ್ನು ಬಂಧಿಸಿದ ಮುಂಬೈ ಪೊಲೀಸರು

sampriya
ಶನಿವಾರ, 1 ಜೂನ್ 2024 (14:41 IST)
Photo By X
ಮುಂಬೈ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ಮಾಡಲು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ನೊಂದಿಗೆ ನಂಟು ಹೊಂದಿರುವ ನಾಲ್ವರು ವ್ಯಕ್ತಿಗಳನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಪಾಕಿಸ್ತಾನಿ ಶಸ್ತ್ರಾಸ್ತ್ರ ಪೂರೈಕೆದಾರರಿಂದ ಶಸ್ತ್ರಾಸ್ತ್ರ ಪಡೆದು ಸಲ್ಮಾನ್‌ ಖಾನ್‌ ಕಾರಿನ ಮೇಲೆ ದಾಳಿ ಮಾಡಲು ಈ ತಂಡ ಸಂಚು ರೂಪಿಸಿತ್ತು. ಇದನ್ನು ಮುಂಬೈ ಪೊಲೀಸರು ಭೇದಿಸಿದ್ದಾರೆ.

ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಬಂಧಿತ ಆರೋಪಿಗಳು.

ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರ ಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎಂದು ತಿಳಿದುಬಂದಿದೆ.

ಸಲ್ಮಾನ್‌ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಬಳಿಕ, ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದರು. ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಲ್ಲಿ ಬಂಧಿಸಲಾಗಿತ್ತು. ಅನುಜ್ ಥಾಪನ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಪಂಜಾಬ್‌ನಲ್ಲಿ ಏಪ್ರಿಲ್ 26 ರಂದು ಬಂಧಿಸಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments