Publish Date: Sun, 09 Oct 2022 (13:36 IST)
Updated Date: Sun, 09 Oct 2022 (13:38 IST)
ನವದೆಹಲಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್ ಇಂದು ರಿಲೀಸ್ ಆಗಿದೆ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ರೈಲರ್ ಲಾಂಚ್ ಮಾಡಿದ್ದಾರೆ. ವಿಶೇಷವೆಂದರೆ ಈ ಟ್ರೈಲರ್ ವೀಕ್ಷಿಸಿದ ಪ್ರಧಾನಿ ಮೋದಿ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಶ್ವಿನಿ ಪುನೀತ್ ಅವರು ಪ್ರಧಾನಿಗೆ ಟ್ವೀಟ್ ಮಾಡಿ ಟ್ರೈಲರ್ ವೀಕ್ಷಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ಪ್ರಧಾನಿ ಸ್ಪಂದಿಸಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. ಗಂಧದ ಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗೂ ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
-Edited by Rajesh Patil