Publish Date: Mon, 08 Nov 2021 (09:26 IST)
Updated Date: Mon, 08 Nov 2021 (09:28 IST)
ಪುನೀತ್ ರಾಜ್ಕುಮಾರ್ ಅವರ ಮೇಲೆ ಜನರು ಇಟ್ಟಂತಹ ಅಭಿಮಾನಕ್ಕೆ ಬೆಲೆ ಕಟ್ಟಲಾಗದು. ಅಪ್ಪು ನಿಧನರಾಗಿ 11 ದಿನ ಆಗಿದ್ದರೂ ಕೂಡ ಫ್ಯಾನ್ಸ್ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ.
ಪ್ರತಿದಿನ ಸಮಾಧಿ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಬರುತ್ತಲೇ ಇದ್ದಾರೆ. ಇಂದು (ನ.8) ಪುನೀತ್ ಅವರ 11ನೇ ದಿನದ ಕಾರ್ಯವನ್ನು ನೆರವೇರಿಸಲಾಗುತ್ತಿದೆ. ಡಾ. ರಾಜ್ ಕುಟುಂಬದವರು ಪುನೀತ್ ನಿವಾಸ ಮತ್ತು ಸಮಾಧಿ ಬಳಿ ಪೂಜೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆ ಮತ್ತು ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಅಪ್ಪು ನಿಧನದ ಬಳಿಕ ಕೆಲವು ಅಭಿಮಾನಿಗಳಿಗೆ ದಿಕ್ಕು ತೋಚದಂತಾಗಿದೆ. ಇಂದು 11ನೇ ದಿನದ ಪುಣ್ಯಸ್ಮರಣೆ ಇರುವುದರಿಂದ ಫ್ಯಾನ್ಸ್ ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಇದರಿಂದ ಕುಟುಂಬದವರ ಕಾರ್ಯಕ್ಕೆ ತೊಂದರೆ ಆಗಬಾರದು. ಹಾಗಾಗಿ ಪುನೀತ್ ರಾಜ್ಕುಮಾರ್ ಮನೆ ಎದುರು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಸಮಾಧಿ ಬಳಿಯೂ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.