ಬೆಂಗಳೂರು: ಕಾರು ಅಪಘಾತದಲ್ಲಿ ಓರ್ವ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ದಾಖಲಾಗಿದ್ದ ದೂರಿನ ವಿಚಾರಣೆ ನಡೆಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಅಕ್ಟೋಬರ್ 30 ರಂದು ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಪತ್ನಿ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 60 ಸಾಕ್ಷಿಗಳನ್ನು ಕಲೆ ಹಾಕಿದ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳು, ಸ್ಥಳೀಯರ ಹೇಳಿಕೆಗಳನ್ನು ದಾಖಲಿಸಲಾಗಿದೆ. ನಾಗಭೂಷಣ್ ವಿರುದ್ಧ ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಪ್ರಕರಣ ದಾಖಲಿಸಲಾಗಿದೆ.