Select Your Language

Notifications

webdunia
webdunia
webdunia
webdunia

ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಸಲ್ಮಾನ್‌ ಖಾನ್‌ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

Salman Khan’s

sampriya

ಮುಂಬೈ , ಬುಧವಾರ, 12 ಜೂನ್ 2024 (19:54 IST)
Photo By X
ಮುಂಬೈ: ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬುಧವಾರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪರಾಧ ವಿಭಾಗದ ಅಧಿಕಾರಿಗಳು ಬಾಂದ್ರಾದಲ್ಲಿರುವ ನಟನ ನಿವಾಸ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು.

ಎಪ್ರಿಲ್ 14 ರಂದು ಕಟ್ಟಡದ ಹೊರಗೆ ಇಬ್ಬರು ಮೋಟಾರ್ ಬೈಕ್ ಸವಾರರು ಹಲವು ಸುತ್ತು ಗುಂಡು ಹಾರಿಸಿದ್ದಾರೆ.

ಘಟನೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎಂದು ಆರೋಪಿಸಿ ಶೂಟರ್‌ಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಿಂದ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು. ಅವರಲ್ಲಿ ಒಬ್ಬನಾದ ಅನುಜ್ ಥಾಪನ್ ಮೇ 1 ರಂದು ಪೊಲೀಸ್ ಲಾಕ್‌ಅಪ್‌ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ

Share this Story:

Follow Webdunia kannada

ಮುಂದಿನ ಸುದ್ದಿ

ರೇವ್‌ ಪಾರ್ಟಿ ಪ್ರಕರಣ, ನಟಿ ಹೇಮಾಗೆ ಜಾಮೀನು ಮಂಜೂರು