Select Your Language

Notifications

webdunia
webdunia
webdunia
webdunia

`ನನಗೆ ಪೊಲೀಸರಿಂದ ಯಾವುದೇ ನೋಟಿಸ್ ಬಂದಿಲ್ಲ’

ಸ್ಯಾಂಡಲ್ ವುಡ್
ಉದ್ಯಮಿ ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಸ್ಯಾಂಡಲ್ ವುಡ್ ನಟರಿಗೆ ಸಂಕಷ್ಟ ಎದುರಾಗಿದೆ ಮಾಧ್ಯಮಗಳು ವರದಿಯಾಗಿವೆ.

ಹೌದು, ಸೆಪ್ಟೆಂಬರ್ 29ರ ರಾತ್ರಿ ಜಯನಗರದ ಸೌತ್ ಎಂಡ್ ಸರ್ಕಲ್`ನಲ್ಲಿ ಗೀತಾ ವಿಷ್ಣು ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತ ಎಸಗಿದ್ದರು. ಈ ಸಂದರ್ಭ ಗೀತಾ ವಿಷ್ಣು ಜೊತೆ ಇಬ್ಬರು ಸ್ಯಾಂಡಲ್ ವುಡ್ ನಟರು ಸೇರಿ 8 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಹಿರಿಯ ನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್, ನಟ ದಿಗಂತ್ ಅವರಿಗೂ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ದಿಗಂತ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಪೊಲೀಸರಿಂದ ಯಾವುದೇ ಕರೆಯೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

   

Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯಾ ಬಚ್ಚನ್ ಪುತ್ರಿಯ ದಸರಾ ಸೆಲೆಬ್ರೇಷನ್ ಹೇಗಿತ್ತು ಗೊತ್ತಾ?