ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂಥ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಡ್ರಗ್ಸ್ ಕಿಂಗ್ ಪಿನ್ ಗಳ ಹೇಳಿಕೆ, ನಿರ್ದೇಶಕ ಇಂದ್ರಜಿತ್ ಲಂಕೇಶ್ ನೀಡಿದ ಮಾಹಿತಿಯ ಕುರಿತಂತೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಈ ಸಭೆಯ ಬಳಿಕ ಸ್ಯಾಂಡಲ್ ವುಡ್ ನಟ-ನಟಿಯರ ವಿಚಾರಣೆಗೆ ಪೊಲೀಸರು ಪಟ್ಟಿ ಸಿದ್ಧ ಮಾಡುವ ಸಾಧ್ಯತೆಯಿದೆ.
ಇನ್ನು, ಕಿಂಗ್ ಪಿನ್ ಅನಿಕಾಗೆ ವಿದೇಶದಿಂದ ಡ್ರಗ್ಸ್ ಬರುತ್ತಿದ್ದು, ಅದನ್ನು ಆಕೆ ಪ್ರತಿಷ್ಠಿತರಿಗೆ ಹಂಚುವ ಕೆಲಸ ಮಾಡುತ್ತಿದ್ದಳು ಎಂದು ತನಿಖೆಯಿಂದ ಗೊತ್ತಾಗಿದೆ.