Publish Date: Fri, 16 Jul 2021 (11:35 IST)
Updated Date: Fri, 16 Jul 2021 (10:08 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸ್ನೇಹಿತರ ವಿರುದ್ಧ ಹಲ್ಲೆ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ‍್ ಮನೆಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ದರ್ಶನ್ ಮತ್ತು ಸ್ನೇಹಿತರು ಮೈಸೂರಿನ ಸಂದೇಶ್ ನಾಗರಾಜ್ ಒಡೆತನದ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನೌಕರನಿಗೆ ಹಲ್ಲೆ ಮಾಡಿದ್ದಾರೆ ಎಂದು ಇಂದ್ರಜಿತ್ ನಿನ್ನೆ ಆರೋಪ ಮಾಡಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನಲೆಯಲ್ಲಿ ಕೋರಮಂಗಲದಲ್ಲಿರುವ ಇಂದ್ರಜಿತ್ ನಿವಾಸದ ಮುಂದೆ ಗಲಾಟೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆಯ ಕ್ರಮವಾಗಿ ಭದ್ರತೆ ಒದಗಿಸಿದ್ದಾರೆ. ಇಂದು ಕೂಡಾ ಇಂದ್ರಜಿತ್ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.