Select Your Language

Notifications

webdunia
webdunia
webdunia
webdunia

ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಗೆ ಹೋಗಲು ಗೃಹ ಇಲಾಖೆ ಒಪ್ಪಿಗೆ ಕಾಯ್ತಿರುವ ಪೊಲೀಸರು

Darshan

Krishnaveni K

ಬೆಂಗಳೂರು , ಬುಧವಾರ, 13 ನವೆಂಬರ್ 2024 (10:53 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಪೊಲೀಸರು ಗೃಹ ಇಲಾಖೆ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ ಚಿಕಿತ್ಸೆಗೆಂದು ಆರು ವಾರಗಳ ಜಾಮೀನು ಪಡೆದಿದ್ದಾರೆ.  ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಆಗಲೇ 10 ದಿನಗಳಾಗುತ್ತಾ ಬಂದಿದೆ. ಈಗಲೂ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ.

ಶಸ್ತ್ರಚಿಕಿತ್ಸೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಇದೂ ಕೂಡಾ ಅವರ ತಂತ್ರಗಾರಿಕೆಯ ಭಾಗ ಎಂದೇ ಹೇಳಲಾಗುತ್ತಿದೆ. ಈ ನಡುವೆ ಪೊಲೀಸರು ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಆದರೆ ಇದಕ್ಕೆ ರಾಜ್ಯ ಗೃಹ ಇಲಾಖೆಯ ಒಪ್ಪಿಗೆ ಪಡೆಯಬೇಕಾಗುತ್ತದೆ. ಹೀಗಾಗಿ ಪೊಲೀಸರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಗೃಹ ಇಲಾಖೆ ಒಪ್ಪಿಗೆ ಸಿಕ್ಕ ಕೂಡಲೇ ಪೊಲೀಸರು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ. ಅದನ್ನು ನೋಡಿಕೊಂಡೇ ಶಸ್ತ್ರಚಿಕಿತ್ಸೆ ಬಗ್ಗೆ ತೀರ್ಮಾನಿಸಲು ದರ್ಶನ್ ಕೂಡಾ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗುತ್ತಿದೆ. ಅಂತೂ ಪೊಲೀಸರು ಮತ್ತು ದರ್ಶನ್ ನಡುವೆ ಜಾಮೀನು ವಿಚಾರದಲ್ಲಿ ಒಳಗೊಳಗೇ ಹಗ್ಗಜಗ್ಗಾಟ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಶಾರುಖ್‌ ಖಾನ್‌ಗೆ ಜೀವಬೆದರಿಕೆ ಆರೋಪ: ರಾಯ್‌ಪುರದಲ್ಲಿ ವಕೀಲ ವಶಕ್ಕೆ