Select Your Language

Notifications

webdunia
webdunia
webdunia
webdunia

ದರ್ಶನ್ ಆಂಡ್ ಗ್ಯಾಂಗ್ ವಿರುದ್ಧ ಇವಿಷ್ಟು ವರದಿಗಳು ಇನ್ನೂ ಬರಬೇಕಿದೆ

Darshan Thoogudeepa

Krishnaveni K

ಬೆಂಗಳೂರು , ಬುಧವಾರ, 14 ಆಗಸ್ಟ್ 2024 (12:09 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಸಾಕ್ಷ್ಯ ಕಲೆ ಹಾಕುತ್ತಿರುವ ಪೊಲೀಸರು ಕೆಲವೊಂದು ಎಫ್ ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ.

ದರ್ಶನ್ ಆಂಡ್ ಗ್ಯಾಂಗ್ ವಿರುದ್ಧ ಈಗಾಗಲೇ ಪೊಲೀಸರು ಹಲವು ಸಾಕ್ಷ್ಯಗಳನ್ನು ದಾಖಲಿಸಿಕೊಂಡಿದ್ದಾರೆ. ಸಾಕ್ಷಿದಾರರ ಹೇಳಿಕೆಗಳನ್ನೂ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಮುನ್ನ ದರ್ಶನ್ ಜೊತೆ ಪಾರ್ಟಿ ಮಾಡಿದ್ದ ನಟ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಮೊನ್ನೆಯಷ್ಟೇ ಪೊಲೀಸರಿಗೆ ಮೃತದೇಹದ ವಿವರವಾದ ಎಫ್ಎಸ್ಎಲ್ ವರದಿ ಬಂದಿದೆ. ಇದೀಗ ಇನ್ನೂ ಕೆಲವು ಎಫ್ಎಸ್ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇದು ಬಂದ ನಂತರವಷ್ಟೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಅದಾದ ಬಳಿಕ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು.

ಇದೀಗ ಪೊಲೀಸರು ಕೆಲವೊಂದು ಡಿಜಿಟಲ್, ಸಿಸಿಟಿವಿ ಫೂಟೇಜ್ ಗಳ ಎಫ್ ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಈ ವರದಿಗಳು ಕೈ ಸೇರಿದ ಬೆನ್ನಲ್ಲೇ ಪೊಲೀಸರು ನ್ಯಾಯಾಲಯಕ್ಕೆ ದರ್ಶನ್ ಮತ್ತು ಇತರೆ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ಗೆ ಇನ್ನಾದ್ರೂ ಒಳ್ಳೆದಾಗಲಿ ಎಂದು ಪೂಜೆ ಮಾಡಿದ ದೊಡ್ಡಣ್ಣ ದಂಪತಿ