ಪವಿತ್ರಾ ಗೌಡ ಮನೆಯಲ್ಲಿ 15 ಕೋಟಿ ರೂ. ಮೌಲ್ಯದ ದಾಖಲೆ ವಶ ವರದಿ: ಇನ್ನೂ ಎಷ್ಟಿದೆಯೋ..

Krishnaveni K
ಬುಧವಾರ, 19 ಜೂನ್ 2024 (10:22 IST)
Photo Credit: Instagram
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮನೆ ಮಹಜರು ವೇಳೆ 15 ಕೋಟಿ ರೂ. ಮೌಲ್ಯದ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪವಿತ್ರಾ ಮನೆಯಲ್ಲಿ ಮೊನ್ನೆ ಪೊಲೀಸರು ಸ್ಥಳ ಮಹಜರು ಮಾಡಿದ್ದರು. ಆಕೆ ಮತ್ತು ಆಕೆಯ ಆಪ್ತ  ಮತ್ತೊಬ್ಬ ಆರೋಪಿ ಪವನ್ ನನ್ನು ಕರೆತಂದು ಮನೆಯಲ್ಲಿ ಮಹಜರು ಮಾಡಲಾಗಿತ್ತು. ಈ ವೇಳೆ ಪವಿತ್ರಾ ಘಟನೆ ನಡೆದ ದಿನ ಧರಿಸಿದ್ದ ಬಟ್ಟೆ, ಚಪ್ಪಲಿ ಮುಂತಾದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಅಷ್ಟೇ ಅಲ್ಲದೆ ಪೊಲೀಸರು 15 ಕೋಟಿ ರೂ. ಮೌಲ್ಯದ ದಾಖಲೆ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಳೆದ 10 ವರ್ಷಗಳಿಂದ ಪವಿತ್ರಾ ಆರ್ ಆರ್ ನಗರದ ಈ ಮೂರು ಮಹಡಿಯ ಐಷಾರಾಮಿ ಬಂಗಲೆಯಲ್ಲಿ ವಾಸ ಮಾಡುತ್ತಿದ್ದಾರೆ. ಈಗ ವಶಪಡಿಸಿಕೊಳ್ಳಲಾಗಿರುವ ಕೋಟ್ಯಾಂತರ ರೂಪಾಯಿ ಮೌಲ್ಯದ ದಾಖಲೆ ಪತ್ರಗಳ ವಿವರ ಬಹಿರಂಗವಾಗಿಲ್ಲ. ನಟಿಸಿದ್ದು ಬೆರಳಣಿಕೆಯ ಸಿನಿಮಾದಲ್ಲಿ. ಈಗ ಬ್ಯುಟೀಕ್, ಫ್ಯಾಶನ್ ಡಿಸೈನಿಂಗ್ ಲೋಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಷ್ಟಕ್ಕೇ ಇಷ್ಟೊಂದು ಆಸ್ತಿ ಮಾಡಿಟ್ಟುಕೊಂಡಿದ್ದಾರಾ ಎಂದು ಅನುಮಾನದಿಂದ ನೋಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments