Publish Date: Mon, 16 Sep 2024 (12:48 IST)
Updated Date: Mon, 16 Sep 2024 (12:52 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸಿದ್ದು, ದಾಸನಿಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ನಟ ದರ್ಶನ್ ಗೆ ರಾಜಾತಿಥ್ಯ ಸಿಗುತ್ತಿತ್ತು. ಈ ಬಗ್ಗೆ ಫೋಟೋಗಳು ವೈರಲ್ ಆಗಿದ್ದವು. ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಮತ್ತು ಸಹಚರರು ದಾಸನ ಸೇವೆಗೆ ಸಿದ್ಧರಾಗಿದ್ದರು. ಆದರೆ ಈ ತಪ್ಪಿಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು. ಇದರಲ್ಲಿ ದರ್ಶನ್ ಎ1 ಆರೋಪಿಯಾಗಿದ್ದರು. ಇದೀಗ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಸಿಗರೇಟು, ಚಹಾ ಸರಬರಾಜು ಮಾಡಿದವರು ಯಾರು ಎಂಬ ಬಗ್ಗೆ ತನಿಖೆ ಪೂರ್ಣಗೊಳಿಸಿದ್ದಾರೆ.
ಸದ್ಯದಲ್ಲೇ ಚಾರ್ಜ್ ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ. ದರ್ಶನ್ ವಿರುದ್ಧ ಎರಡು ಮತ್ತು ಜೈಲು ಅಧಿಕಾರಿಗಳ ವಿರುದ್ಧ ಒಂದು ಎಫ್ಐಆರ್ ದಾಖಲಾಗಿತ್ತು. ಈ ಮೂರು ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಇದರಲ್ಲಿ ದರ್ಶನ್ ತಪ್ಪಿತಸ್ಥ ಎಂದು ಸಾಬೀತಾದರೆ ಮತ್ತೆ ಅವರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.