ದರ್ಶನ್ ಗೆ ಮತ್ತೊಂದು ಸಂಕಷ್ಟ: ಹೊಸ ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾದ ಪೊಲೀಸರು

Krishnaveni K
ಸೋಮವಾರ, 16 ಸೆಪ್ಟಂಬರ್ 2024 (12:48 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸಿದ್ದು, ದಾಸನಿಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ನಟ ದರ್ಶನ್ ಗೆ ರಾಜಾತಿಥ್ಯ ಸಿಗುತ್ತಿತ್ತು. ಈ ಬಗ್ಗೆ ಫೋಟೋಗಳು ವೈರಲ್ ಆಗಿದ್ದವು. ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಮತ್ತು ಸಹಚರರು ದಾಸನ ಸೇವೆಗೆ ಸಿದ್ಧರಾಗಿದ್ದರು. ಆದರೆ ಈ ತಪ್ಪಿಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು. ಇದರಲ್ಲಿ ದರ್ಶನ್ ಎ1 ಆರೋಪಿಯಾಗಿದ್ದರು. ಇದೀಗ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಸಿಗರೇಟು, ಚಹಾ ಸರಬರಾಜು ಮಾಡಿದವರು ಯಾರು ಎಂಬ ಬಗ್ಗೆ ತನಿಖೆ ಪೂರ್ಣಗೊಳಿಸಿದ್ದಾರೆ.

ಸದ್ಯದಲ್ಲೇ ಚಾರ್ಜ್ ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ. ದರ್ಶನ್ ವಿರುದ್ಧ ಎರಡು ಮತ್ತು ಜೈಲು ಅಧಿಕಾರಿಗಳ ವಿರುದ್ಧ ಒಂದು ಎಫ್ಐಆರ್ ದಾಖಲಾಗಿತ್ತು. ಈ ಮೂರು ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ.  ಇದರಲ್ಲಿ ದರ್ಶನ್ ತಪ್ಪಿತಸ್ಥ ಎಂದು ಸಾಬೀತಾದರೆ ಮತ್ತೆ ಅವರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments