Select Your Language

Notifications

webdunia
webdunia
webdunia
webdunia

ರಾಮ್ ಚರಣ್ ಹುಟ್ಟು ಹಬ್ಬಕ್ಕೆ ‘ಆಚಾರ್ಯ’ ಚಿತ್ರದ ಪೋಸ್ಟರ್ ರಿಲೀಸ್

ರಾಮ್ ಚರಣ್ ಹುಟ್ಟು ಹಬ್ಬಕ್ಕೆ ‘ಆಚಾರ್ಯ’ ಚಿತ್ರದ ಪೋಸ್ಟರ್ ರಿಲೀಸ್
ಹೈದರಾಬಾದ್ , ಶನಿವಾರ, 27 ಮಾರ್ಚ್ 2021 (12:01 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ರಾಮ್ ಚರಣ್ ಅಭಿನಯದ ‘ಆಚಾರ್ಯ’ ಚಿತ್ರವನ್ನು ನಿರ್ದೇಶಕ ಕೊರಟಾಲ ಶಿವ ನಿರ್ದೇಶಿಸುತ್ತಿದ್ದಾರೆ. ಇದೀಗ ಇಂದು ರಾಮ್ ಚರಣ್ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ.

ಈ ಚಿತ್ರದಲ್ಲಿ ಸಿದ್ಧ ಪಾತ್ರದಲ್ಲಿ ರಾಮ್ ಚರಣ್ ನಟಿಸಿದ್ದಾರೆ, ಬಿಡುಗಡೆಯಾದ ಹೊಸ ಪೋಸ್ಟರ್ ನಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಕೈಯಲ್ಲಿ ಬಂದೂಕ ಹಿಡಿದು ನಕ್ಸಲೈಟ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್ ಇಬ್ಬರು ನಟರ ಅಭಿಮಾನಿಗಳನ್ನು ಆಕರ್ಷಿಸಿದೆ.

ತಂದೆ –ಮಗನ ಜೋಡಿ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರಿಂದ ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತಿದೆ. ಅಲ್ಲದೇ ಈ ಚಿತ್ರದಲ್ಲಿ ಚಿರಂಜೀವಿ ಅವರಿಗೆ ಜೋಡಿಯಾಗಿ ಕಾಜಲ್ ಹಾಗೂ ರಾಮ್ ಚರಣ್ ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಲ್ಡೀವ್ಸ್ ಬೀಚ್ ನಲ್ಲಿ ದಿಗಂತ್-ಐಂದ್ರಿತಾ ರೊಮ್ಯಾಂಟಿಕ್ ಮೂಡ್