Publish Date: Mon, 30 Nov 2020 (08:34 IST)
Updated Date: Mon, 30 Nov 2020 (08:35 IST)
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಪ್ಯಾನ್ ಇಂಡಿಯಾ ಚಿತ್ರವನ್ನು ಘೋಷಿಸಿ ಸಂಚಲನವನ್ನು ಸೃಷ್ಟಿಸಿದ್ದಾರೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಪ್ಯಾನ್ ಇಂಡಿಯಾ ಚಲನಚಿತ್ರಗಳ ಸರಣಿಯೊಂದಿಗೆ ಬಾಹುಬಲಿ ಪ್ರಭಾಸ್ ಮತ್ತೊಮ್ಮೆ ದಾಖಲೆಗಳನ್ನು ಮುರಿಯಲು ಸಜ್ಜಾಗಿದ್ದಾರೆ ಎಂದು ಅಭಿಮಾನಿಗಳು ಸಂತಸಗೊಂಡಿದ್ದಾರೆ.
ಪ್ರಭಾಸ್ ಫೇಸ್ ಬುಕ್ ನಲ್ಲಿ ಮಾತ್ರ 2.1ಮಿಲಿಯನ್ ಅನುಯಾಯಿಗಳನ್ನು ಪಡೆದು ಅಗ್ರ ನಾಯಕ ಎಂಬ ದಾಖಲೆಯನ್ನು ಹೊಂದಿದ್ದಾರೆ. ಇವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ.