Publish Date: Sun, 12 Sep 2021 (08:50 IST)
Updated Date: Sun, 12 Sep 2021 (09:08 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರತಂಡ ಮತ್ತೊಂದು ಸುತ್ತಿನ ಚಿತ್ರೀಕರಣ ನಿನ್ನೆಯಿಂದ ಆರಂಭವಾಗಿದೆ.
ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಮುಖ್ಯ ಸನ್ನಿವೇಶವೊಂದರ ಚಿತ್ರೀಕರಣ ನಡೆಯತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ ಚಿತ್ರೀಕರಣ ಮುಂದುವರಿಯಲಿದೆ ಎನ್ನಲಾಗಿದೆ.
ಈ ಸನ್ನಿವೇಶದ ಚಿತ್ರೀಕರಣಕ್ಕೆ ಪ್ರಭಾಸ್ ಚಿತ್ರತಂಡವನ್ನು ಕೂಡಿಕೊಂಡಿದ್ದಾರೆ. ಈಗಾಗಲೇ ಚಿತ್ರತಂಡ ಬಹುತೇಕ ಚಿತ್ರೀಕರಣ ನಡೆಸಿದೆ. ಮುಂದಿನ ವರ್ಷ ಚಿತ್ರ ರಿಲೀಸ್ ಆಗಲಿದೆ.