ಹೈದರಾಬಾದ್: ಆದಿಪುರುಷ್ ಸಿನಿಮಾ ಜೋಡಿ ಪ್ರಭಾಸ್-ಕೃತಿ ಸನನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ.
ಈ ಬಗ್ಗೆ ಪ್ರಭಾಸ್ ಆಗಲೀ, ಕೃತಿಯಾಗಲೀ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಇಬ್ಬರ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಈ ಬಗ್ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಇದೆಲ್ಲಾ ಆದಿಪುರುಷ್ ಸಿನಿಮಾ ಪ್ರಮೋಷನ್ ಗಾಗಿ ಮಾಡುತ್ತಿರುವ ಚೀಪ್ ಗಿಮಿಕ್ ಎಂದು ಆರೋಪಿಸಿದ್ದಾರೆ. ಈ ಮೊದಲು ಬಾಹುಬಲಿ ಸಿನಿಮಾ ಬಿಡುಗಡೆ ಸಂದರ್ಭದಲ್ಲೂ ಪ್ರಭಾಸ್-ಅನುಷ್ಕಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಇಬ್ಬರೂ ನಾವು ಉತ್ತಮ ಸ್ನೇಹಿತರಷ್ಟೇ ಎಂದು ಸ್ಪಷ್ಟನೆ ನೀಡಿದ್ದರು. ಈಗಲೂ ಅದೇ ರೀತಿ ರೂಮರ್ ಹರಡಿಸಲಾಗುತ್ತಿದೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.