Publish Date: Sat, 01 Oct 2022 (16:51 IST)
Updated Date: Sat, 01 Oct 2022 (16:53 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿಬಂದ ಮತ್ತೊಂದು ಬ್ಲಾಕ್ ಬ್ಲಸ್ಟರ್ ಸಿನಿಮಾವನ್ನು ಟಾಲಿವುಡ್ ನಟ ಪ್ರಭಾಸ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಲಾರ್ ನಟ ಪ್ರಭಾಸ್ ಕಾಂತಾರ ಸಿನಿಮಾವನ್ನು ವೀಕ್ಷಿಸಿ, ಕಾಂತಾರ ಸಿನಿಮಾವನ್ನು ತುಂಬಾ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅಂತೂ ಅದ್ಭುತ. ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕರಾವಳಿ ಹಿನ್ನಲೆಯಲ್ಲಿ ಕಾಂತಾರ ಸಿನಿಮಾ ಈಗ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎರಡನೇ ದಿನವೂ ಚಿತ್ರದ ಶೋ ಸಂಖ್ಯೆ ಹೆಚ್ಚಿಸಲಾಗಿದೆ.
-Edited by Rajesh Patil