Publish Date: Tue, 09 Feb 2021 (09:01 IST)
Updated Date: Tue, 09 Feb 2021 (09:02 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಪ್ರಭಾಸ್ ನಾಯಕರಾಗಿರುವ ಪ್ರಶಾಂತ್ ನೀಲ್ ನಿರ್ದೇಶನದ ಬಹುಭಾಷಾ ಚಿತ್ರ ಸಲಾರ್ ಮೊದಲ ಹಂತದ ಚಿತ್ರೀಕರಣ ಪೂರ್ತಿಯಾಗಿದೆ.
ಕಳೆದ ವಾರವಷ್ಟೇ ತೆಲಂಗಾಣದಲ್ಲಿ ವಿಶೇಷ ಸೆಟ್ ಹಾಕಿ ಚಿತ್ರೀಕರಣ ಪ್ರಾರಂಭಿಸಲಾಗಿತ್ತು. ಪ್ರಭಾಸ್ ಇಂಟ್ರಡಕ್ಷನ್ ದೃಶ್ಯವನ್ನು ಚಿತ್ರೀಕರಿಸಲಾಗಿತ್ತು. ಇದೀಗ ಮೊದಲ ಹಂತ ಮುಕ್ತಾಯವಾಗಿರುವುದಾಗಿ ತಿಳಿದುಬಂದಿದೆ. ಸಲಾರ್ ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಕೆಜಿಎಫ್ ಚಿತ್ರದ ಬಳಿಕ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಮತ್ತೊಂದು ಬಹುನಿರೀಕ್ಷಿತ ಚಿತ್ರವಾಗಿದೆ.