Webdunia - Bharat's app for daily news and videos

Install App

ಪ್ರಭಾಸ್‌ ಅಭಿನಯದ ಕಲ್ಕಿ ಚಿತ್ರದ ಟ್ರೈಲರ್‌ ಬಿಡುಗಡೆ: ಹಾಲಿವುಡ್‌ ರೇಂಜ್‌ ಎಂದ ಫ್ಯಾನ್ಸ್‌

Sampriya
ಮಂಗಳವಾರ, 11 ಜೂನ್ 2024 (14:30 IST)
Photo Courtesy X
ಹೈದರಾಬಾದ್: ‌ಟಾಲಿವುಡ್‌ನ ಪ್ರಭಾಸ್‌ ನಟನೆಯ ಕಲ್ಕಿ 2898 ಎಡಿ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ನಾಗ್‌ ಅಶ್ವಿನ್‌ ನಿರ್ದೇಶನ ಈ ಸಿನಿಮಾ ಹಾಲಿವುಡ್‌ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪ್ರಭಾಸ್‌ ಜೊತೆಗೆ ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ಈ ಚಿತ್ರದ ಟ್ರೈಲರ್ ಸೋಮವಾರ ರಾತ್ರಿ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೈಲರ್‌ ರಿಲೀಸ್‌ ಮಾಡಲಾಗಿದ್ದು, ದಾಖಲೆಯ ವೀಕ್ಷಣೆಯನ್ನು ಕಂಡು ಮುನ್ನುಗ್ಗುತ್ತಿದೆ.

ಈ ಟ್ರೈಲರ್‌ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ ಇದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

‌ಈ ಟ್ರೈಲರ್‌ನಲ್ಲಿ ಕಮಲ್‌ ಹಾಸನ್‌ ಪ್ರಮುಖ ಹೈಲೈಟ್‌ ಎಂದು ಫ್ಯಾನ್ಸ್‌ ಹೇಳುತ್ತಿದ್ದಾರೆ. ಉಳಿದಂತೆ ಪ್ರಭಾಸ್‌ ಅಭಿಮಾನಿಗಳು ಟ್ರೇಲರ್‌ ಅನ್ನು ಹಾಡಿ ಹೊಗಳಿದ್ದಾರೆ.  ‌‌ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments