Publish Date: Sun, 11 Sep 2022 (09:48 IST)
Updated Date: Sun, 11 Sep 2022 (09:50 IST)
ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಚಿಕ್ಕಪ್ಪ, ನಟ, ರಾಜಕಾರಣಿ ಕೃಷ್ಣಂ ರಾಜು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಅನಾರೋಗ್ಯದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ.
1966 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಕೊನೆಯದಾಗಿ ನಟಿಸಿದ್ದ ಸಿನಿಮಾ ಪ್ರಭಾಸ್ ನಾಯಕರಾಗಿರುವ ರಾಧೇ ಶ್ಯಾಮ್. ಸುಮಾರು 183 ಚಿತ್ರಗಳಲ್ಲಿ ನಟಿಸಿದ್ದ ಕೃಷ್ಣಂರಾಜು ಕೇಂದ್ರ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಅವರ ನಿಧನಕ್ಕೆ ಟಾಲಿವುಡ್, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.