Select Your Language

Notifications

webdunia
webdunia
webdunia
webdunia

ಮತ್ತೆ ಪೌರಾಣಿಕ ಪಾತ್ರದಲ್ಲಿ ನಟಿಸಲಿದ್ದಾರೆ ಪ್ರಭಾಸ್

ಮತ್ತೆ ಪೌರಾಣಿಕ ಪಾತ್ರದಲ್ಲಿ ನಟಿಸಲಿದ್ದಾರೆ ಪ್ರಭಾಸ್
ಹೈದರಾಬಾದ್ , ಮಂಗಳವಾರ, 18 ಆಗಸ್ಟ್ 2020 (09:29 IST)
ಹೈದರಾಬಾದ್ : ಈ ಹಿಂದೆ ಸೂಪರ್ ಹಿಟ್ ಚಿತ್ರ ಬಾಹುಬಲಿಯಂತಹ ಪೌರಾಣಿಕ ಪಾತ್ರಗಳಲ್ಲಿ ಮಿಂಚಿದ ನಟ ಪ್ರಭಾಸ್ ಇದೀಗ ಮತ್ತೆ  ಪೌರಾಣಿಕ ಚಿತ್ರದಲ್ಲಿ ನಟಿಸಲಿದ್ದಾರಂತೆ.

ಬಾಲಿವುಡ್ ನಿರ್ದೇಶಕ ಓಂ ರಾವತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪೌರಾಣಿಕ ಚಿತ್ರದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಈ ಸಿನಿಮಾದ ಟೈಟಲ್ ಪೋಸ್ಟರ್ ನ್ನು ಇಂದು ಬೆಳಿಗ್ಗೆ 7.11ಕ್ಕೆ  ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ಆದಿಪುರುಷ್ ಎಂಬ ಟೈಟಲ್ ನೀಡಲಾಗಿದ್ದು, ಇದರ ಪೋಸ್ಟರ್  ನಲ್ಲಿ ರಾಮ, ಹನುಮಂತ ಮತ್ತು ರಾವಣ ಚಿತ್ರಗಳು ಕಂಡುಬಂದ ಕಾರಣ ಇದು ಪೌರಾಣಿಕ ಚಿತ್ರವಾಗಿದ್ದು, ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಊಹಿಸಲಾಗಿದೆ.

ಈ ಸಿನಿಮಾ ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗಲಿದ್ದು, ನಂತರ ಕನ್ನಡ, ತಮಿಳು, ಮಲಯಾಳಂ ಸೇರಿದಂತೆ ಇತರೇ ಭಾಷೆಗಳಲ್ಲಿ ಡಬ್ ಆಗಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಎಸ್ಪಿಬಿ : ನಟ ರಜನಿಕಾಂತ್ ಖುಷ್