ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಸಂದೇಶ್ ನಾಗರಾಜ್ ನಿರ್ಮಿಸಲಿರುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಭುದೇವ ಅಭಿನಯಿಸಲಿದ್ದಾರೆ.
ಈ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗಿದ್ದು, ಈ ಮೂಲಕ ಬಹಳ ದಿನಗಳ ನಂತರ ಪ್ರಭುದೇವ ಕನ್ನಡ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.
ಈ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡಲಾಗಿದ್ದು, ಕನ್ನಡ, ತೆಲುಗು, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಮೂಡಿಬರಲಿದೆ. ಸದ್ಯಕ್ಕೆ ಚಿತ್ರ ಆರಂಭದ ಹಂತದಲ್ಲಿದೆ. ಉಳಿದ ತಾರಾಗಣದ ಬಗ್ಗೆ ಸದ್ಯದಲ್ಲೇ ಉತ್ತರ ಸಿಗಲಿದೆ.