Publish Date: Fri, 02 Apr 2021 (09:19 IST)
Updated Date: Fri, 02 Apr 2021 (09:20 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ತಾರಾ ದಂಪತಿ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿ ಪ್ರಜ್ವಲ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ವಿಚಾರವನ್ನು ಸ್ವತಃ ದಂಪತಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ನನಗೆ ಹಾಗೂ ಪ್ರಜ್ವಲ್ ದೇವರಾಜ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ನಾವು ಚಿಕಿತ್ಸೆ ಪಡೆಯುತ್ತಿದ್ದೇವೆ. ಜೊತೆಯಾಗಿ ಇದರ ವಿರುದ್ಧ ಹೋರಾಡಲಿದ್ದೇವೆ. ಎಲ್ಲರೂ ಸುರಕ್ಷಿತರಾಗಿರಿ ಎಂದು ರಾಗಿಣಿ ಬರೆದುಕೊಂಡಿದ್ದಾರೆ.
ಅತ್ತ ಪ್ರಜ್ವಲ್ ದೇವರಾಜ್ ಕೂಡಾ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಇದೇ ಸಂದೇಶ ಬರೆದಿದ್ದಾರೆ. ನಾವಿಬ್ಬರೂ ಆದಷ್ಟು ಬೇಗ ಮಹಾಮಾರಿಯಿಂದ ಚೇತರಿಸಿಕೊಳ್ಳಲಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದು ಪ್ರಜ್ವಲ್ ಹೇಳಿದ್ದಾರೆ.