ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕಾಂತಾರ ಸಿನಿಮಾದಲ್ಲಿ 'ಸಿಂಗಾರ ಸಿರಿಯೇ' ಸಾಹಿತಿ ಪ್ರಮೋದ್ ಮರವಂತೆ ಅವರು ಗಾಯಕಿ ಸುಚೇತ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಡಿ.5ರಂದು ಕುಂದಾಪುರದಲ್ಲಿ ಸಿಂಗರ್ ಸುಚೇತ ಜೊತೆ ಪ್ರಮೋದ್ ಮರವಂತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಈಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ ಗುರುವಾರ ಕುಟುಂಬದವರ ಸಮ್ಮುಖದಲ್ಲಿ ಹಸೆಮಣೆ ಏರಿದರು.
ಈಚೆಗೆ ನಿಶ್ಚಿತಾರ್ಥ ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಪ್ರಮೋದ್ ಅವರು ರಾಗಕ್ಕೆ ಪದ ಸೇರಿದೆ ಬದುಕೊಂದು ಹಾಡಾಗಿದೆ ಎಂದು ಸಾಲುಗಳನ್ನು ಬರೆದು ಭಾವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದರು.
ಪ್ರಮೋದ್ ಭಾವಿ ಪತ್ನಿಯ ಹೆಸರು ಸುಚೇತ ಬಸ್ರೂರು, ಕೆಜಿಎಫ್ 2 ಚಿತ್ರದಲ್ಲಿ ಗಗನ ನೀ ಭುವನ ನೀ ಎಂಬ ಹಾಡನ್ನು ಸೊಗಸಾಗಿ ಹಾಡುವ ಮೂಲಕ ಸದ್ದು ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸೊಸೆಯಾಗಿದ್ದಾರೆ. ಇವರು ರವಿ ಬಸ್ರೂರು ಅವರ ಅಕ್ಕನ ಮಗಳು ಸುಚೇತ.