ಗಾಯಕಿ ಸುಚೇತ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಮೋದ್ ಮರವಂತೆ

Sampriya
ಶುಕ್ರವಾರ, 6 ಡಿಸೆಂಬರ್ 2024 (14:58 IST)
Photo Courtesy X
ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕಾಂತಾರ ಸಿನಿಮಾದಲ್ಲಿ 'ಸಿಂಗಾರ ಸಿರಿಯೇ' ಸಾಹಿತಿ ಪ್ರಮೋದ್ ಮರವಂತೆ ಅವರು ಗಾಯಕಿ ಸುಚೇತ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಡಿ.5ರಂದು ಕುಂದಾಪುರದಲ್ಲಿ ಸಿಂಗರ್ ಸುಚೇತ ಜೊತೆ ಪ್ರಮೋದ್ ಮರವಂತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಈಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ ಗುರುವಾರ ಕುಟುಂಬದವರ ಸಮ್ಮುಖದಲ್ಲಿ ಹಸೆಮಣೆ ಏರಿದರು.

ಈಚೆಗೆ ನಿಶ್ಚಿತಾರ್ಥ ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಪ್ರಮೋದ್ ಅವರು ರಾಗಕ್ಕೆ ಪದ ಸೇರಿದೆ ಬದುಕೊಂದು ಹಾಡಾಗಿದೆ ಎಂದು ಸಾಲುಗಳನ್ನು ಬರೆದು ಭಾವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದರು.

ಪ್ರಮೋದ್ ಭಾವಿ ಪತ್ನಿಯ ಹೆಸರು ಸುಚೇತ ಬಸ್ರೂರು, ಕೆಜಿಎಫ್ 2 ಚಿತ್ರದಲ್ಲಿ ‘ಗಗನ ನೀ ಭುವನ ನೀ’ ಎಂಬ ಹಾಡನ್ನು ಸೊಗಸಾಗಿ ಹಾಡುವ ಮೂಲಕ ಸದ್ದು ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸೊಸೆಯಾಗಿದ್ದಾರೆ. ಇವರು ರವಿ ಬಸ್ರೂರು ಅವರ ಅಕ್ಕನ ಮಗಳು ಸುಚೇತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments