ಪ್ರಶಾಂತ್ ನೀಲ್-ಜ್ಯೂ ಎನ್ ಟಿಆರ್ ಸಿನಿಮಾ ತಡವಾಗಲು ಕಾರಣವೇನು

Krishnaveni K
ಭಾನುವಾರ, 21 ಏಪ್ರಿಲ್ 2024 (13:09 IST)
Photo Courtesy: Twitter
ಹೈದರಾಬಾದ್: ಆರ್ ಆರ್ ಆರ್ ಸಕ್ಸಸ್ ಬಳಿಕ ಬಾಲಿವುಡ್ ನಲ್ಲಿ ವಾರ್ 2 ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಜ್ಯೂ ಎನ್‍ ಟಿಆರ್ ಮುಂದೆ ಕನ್ನಡ ಮೂಲದ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡಲಿದ್ದಾರೆ.

ಪ್ರಶಾಂತ್ ನೀಲ್ ಮತ್ತು ಜ್ಯೂ ಎನ್ ಟಿಆರ್ ಕಾಂಬಿನೇಷನ್ ನ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ. ಸಲಾರ್ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಕೈಗೆತ್ತಿಕೊಳ್ಳುತ್ತಿರುವ ಮತ್ತೊಂದು ಸಿನಿಮಾವಿದು. ಆದರೆ ಇದುವರೆಗೆ ಈ ಸಿನಿಮಾ ತಂಡದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಕೆಲವು ಮೂಲಗಳ ಪ್ರಕಾರ ಈ ಸಿನಿಮಾ ಆಗಸ್ಟ್ ನಲ್ಲಿ ಆರಂಭವಾಗಲಿದೆ ಎಂದು ಸುದ್ದಿ ಕೇಳಿಬರುತ್ತಿದೆ.

ಕೆಜಿಎಫ್ ಮತ್ತು ಸಲಾರ್ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಮಾರುಕಟ್ಟೆ ರಾಷ್ಟ್ರಮಟ್ಟದಲ್ಲಿದೆ. ಪ್ರಶಾಂತ್ ನಿರ್ದೇಶನದಲ್ಲಿ ಸಿನಿಮಾ ಮಾಡಲು ಸ್ಟಾರ್ ನಟರೇ ಕ್ಯೂನಲ್ಲಿದ್ದಾರೆ. ಕೆಜಿಎಫ್ 2  ಮುಗಿದ ಬೆನ್ನಲ್ಲೇ ಪ್ರಶಾಂತ್ ನೀಲ್ ಹಲವು ಆಫರ್ ಪಡೆದಿದ್ದರು. ಇದರಲ್ಲಿ ಜ್ಯೂ ಎನ್ ಟಿಆರ್ ಜೊತೆಗಿನ ಸಿನಿಮಾ ಪ್ರಮುಖವಾದುದು.

ಈ ಹಿಂದೆ ದೇವರ ಸಿನಿಮಾ ಶೂಟಿಂಗ್ ಮುಗಿದ ಬಳಿಕ ಏಪ್ರಿಲ್ ನಲ್ಲಿ ಈ ಸಿನಿಮಾ ಆರಂಭವಾಗಲಿದೆ ಎಂಬ ಮಾಹಿತಿಯಿತ್ತು. ಆದರೆ ದೇವರ, ವಾರ್ 2 ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾ ಮುಂದಕ್ಕೆ ಹೋಗಿದೆ. ಈ ಎರಡೂ ಕೂಡಾ ಬಿಗ್ ಬಜೆಟ್ ಸಿನಿಮಾಗಳಾಗಿರುವುದರಿಂದ ಮತ್ತು ಪ್ರಶಾಂತ್ ನೀಲ್ ಸಿನಿಮಾಗೆ ಸಾಕಷ್ಟು ದಿನ ಬೇಕಾಗಿರುವುದರಿಂದ ಬಹುಶಃ ಸಿನಿಮಾ ತಡವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments