ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ನಿರ್ದೇಶಕ-ನಾಯಕ ನಟನ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಕೇಳಿಬರುತ್ತಿದೆ.
ನಿರ್ದೇಶಕ ಪ್ರಶಾಂತ್ ನೀಲ್ ನಾಯಕ ಪ್ರಭಾಸ್ ಮೇಲೆ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಪ್ರಭಾಸ್ ಒಂದೇ ಸಮಯಕ್ಕೆ ಹಲವು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಇದರಿಂದಾಗಿ ಆಗಾಗ ಅವರು ತಮ್ಮ ಲುಕ್, ಸ್ಟೈಲ್ ಬದಲಾಯಿಸಿಕೊಳ್ಳುತ್ತಿದ್ದಾರೆ. ಇದು ಸಲಾರ್ ಲುಕ್ ಮೇಲೆ ಪರಿಣಾಮ ಬೀರುತ್ತಿದೆ ಎನ್ನುವುದು ಪ್ರಶಾಂತ್ ನೀಲ್ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇಬ್ಬರೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!