Publish Date: Tue, 25 Jul 2017 (13:30 IST)
Updated Date: Tue, 25 Jul 2017 (13:35 IST)
ಭುವನ್ ತೊಡೆಗೆ ಕಚ್ಚಿ ಗಾಯಗೊಳಿಸಿದ ಆರೋಪಕ್ಕೆ ಸಿಲುಕಿರುವ ಪ್ರಥಮ್, ಭುವನ್ ವಿರುದ್ಧ ಪ್ರತಿ ದೂರು ನೀಡಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ನೀಡಿದ್ದಾರೆ.
ಮೊದಲು ಜಗಳ ತೆಗೆದಿದ್ದು ಭುವನ್, ನನ್ನ ಮೇಲೆ ಹಲ್ಲೆ ನಡೆಸಿ ಕುತ್ತಿಗೆಗೆ ಗಾಯಗೊಳಿಸಿರುವುದಾಗಿ ಪ್ರಥಮ್ ದೂರು ನೀಡಿದ್ದಾರೆ. ನಿನ್ನೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಪ್ರಥಮ್, ರಾತ್ರಿ 12.30ರ ಸುಮಾರಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಿನ್ನೆ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಕೇಳಿದಾಗ ದೂರು ನೀಡುವುದಾಗಿ ಪ್ರಥಮ್ ಹೇಳಿದ್ದರು.
ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಲೆ ಪ್ರಥಮ್ ಕುತ್ತಿಗೆಗೆ ಮೆಡಿಕಲ್ ಬೆಲ್ಟ್ ಸುತ್ತಿಕೊಂಡಿರುವುದು ಕಂಡುಬಂದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರಥಮ್ ಸಹಚರರು, ಧಾರಾವಾಹಿ ಚಿತ್ರೀಕರಣದ ವೇಳೆ ನಡೆದ ಚಿಕ್ಕ ಜಗಳ ದೊಡ್ಡದು ಮಾಡುವುದು ಬೇಡವೆಂದು ಸುಮ್ಮನಿದ್ದೆವು. ಇದೀಗ, ಭುವನ್ ದೂರು ಕೊಟ್ಟಿರುವುದರಿಂದ ನಾವು ಸಹ ದೂರು ದಾಖಲಿಸಿರುವುದಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ