Publish Date: Fri, 26 Jun 2020 (10:31 IST)
Updated Date: Fri, 26 Jun 2020 (10:32 IST)
ಬೆಂಗಳೂರು: ಇತ್ತೀಚೆಗಷ್ಟೇ ಪತಿ ಚಿರಂಜೀವಿ ಸರ್ಜಾ ಅಕಾಲಿಕ ಮರಣದಿಂದ ದುಃಖದಲ್ಲಿರುವ ನಟಿ ಮೇಘನಾ ರಾಜ್ ರನ್ನು ಚಿತ್ರರಂಗದವರು, ಹಿತೈಷಿಗಳು ಭೇಟಿ ಮಾಡಿ ಸಾಂತ್ವನ ಹೇಳುತ್ತಿದ್ದಾರೆ.
ಇದೀಗ ನಟ ಒಳ್ಳೆ ಹುಡುಗ ಪ್ರಥಮ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ರಾಕೇಶ್ ಮೇಘನಾ ಅವರ ಮನೆಗೆ ತೆರಳಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ ಬಂದಿದ್ದಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪ್ರಥಮ್ ಮೇಘನಾ ಬೇಗನೇ ಈ ಆಘಾತದಿಂದ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.