Select Your Language

Notifications

webdunia
webdunia
webdunia
webdunia

ಪ್ರವಾಹ: ತೆಲಂಗಾಣ ಸಿಎಂಗೆ ಕೋಟಿ ಮೊತ್ತದ ಚೆಕ್ ಹಸ್ತಾಂತರಿದ ಪವಣ್‌ ಕಲ್ಯಾಣ್‌

DCM Pawan Kalyan

Sampriya

ಹೈದರಾಬಾದ್ , ಬುಧವಾರ, 11 ಸೆಪ್ಟಂಬರ್ 2024 (15:06 IST)
Photo Courtesy X
ಹೈದರಾಬಾದ್: ಟಾಲಿವುಡ್‌ನ ಸೂಪರ್‌ ಸ್ಟಾರ್‌, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ₹1 ಕೋಟಿ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.

ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ತತ್ತರಿಸಿದೆ. ಹಲವೆಡೆ ಪ್ರವಾಹ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದೆ. ಜನರು ಸಾಕಷ್ಟು ತೊಂದರೆಗೆ ಒಳಗಾಗಿದ್ದು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.

ತೆಲುಗು ನಟರು ಹಾಗೂ ಇತರರು ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ನಟರಾದ ಚಿರಂಜೀವಿ, ಜೂನಿಯರ್‌ ಎನ್‌ಟಿಆರ್‌, ಅಲ್ಲು ಅರ್ಜುನ್, ಮಹೇಶ್‌ಬಾಬು ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ₹50 ಲಕ್ಷ ದೇಣಿಗೆ ನೀಡಿದ್ದಾರೆ.

ಇತ್ತ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ ₹1 ಕೋಟಿ ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಜತೆಗೆ ಆಂಧ್ರಪ್ರದೇಶದ 400 ಗ್ರಾಮ ಪಂಚಾಯಿತಿಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಘಾತದಲ್ಲಿ ಕಿರಣ್‌ಗೆ ಏನಾಯ್ತು, ಆಸ್ಪತ್ರೆಯಿಂದಲೇ ಕೊಟ್ಟ ಅಪ್‌ಡೇಟ್‌ ಏನು