Publish Date: Mon, 15 Nov 2021 (17:48 IST)
Updated Date: Mon, 15 Nov 2021 (17:54 IST)
ನಾಳೆ ನಡೆಯುತ್ತಿರುವ ಪುನೀತ್ ನಮನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದೆ.
ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಅನಗತ್ಯವಾಗಿ ಅವ್ಯವಸ್ಥೆ ಆದರೆ ಪೊಲೀಸ್ ಇಲಾಖೆ ಹೊಣೆಯಲ್ಲ ಅಂತ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೋಲೀಸ್ ಇಲಾಖೆ ಖಡಕ್ ಸೂಚನೆ ನೀಡಿದೆ. ದೊಡ್ಮನೆ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ವಿವಿಐಪಿ, ವಿಐಪಿ ಪಾಸ್ ಗಳಿರುತ್ತವೆ. ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. 2,000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂಗಳು ಹಾಗು ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.