Publish Date: Mon, 24 Aug 2020 (12:21 IST)
Updated Date: Mon, 24 Aug 2020 (12:22 IST)
ಬೆಂಗಳೂರು: ಮಲಯಾಳಂ ಚಿತ್ರರಂಗದ ಸ್ಪುರದ್ರೂಪಿ ನಟ ಪೃಥ್ವಿರಾಜ್ ಸುಕುಮಾರನ್ ಸದ್ಯದಲ್ಲೇ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ. ಅಂದರೆ ಅವರ ಅಭಿನಯದ ಸಿನಿಮಾವೊಂದು ಕನ್ನಡದಲ್ಲೂ ರಿಲೀಸ್ ಆಗಲಿದೆ.
ಮಲಯಾಳಂ ಮಾತ್ರವಲ್ಲದೆ, ತಮಿಳಿನಲ್ಲೂ ಹಿಟ್ ಚಿತ್ರಗಳನ್ನು ಕೊಟ್ಟಿರುವ ಪೃಥ್ವಿ ಇದೇ ಮೊದಲ ಬಾರಿಗೆ ಕನ್ನಡಕ್ಕೆ ಬರುತ್ತಿದ್ದಾರೆ. ಅವರು ನಾಯಕರಾಗಿರುವ ಹೊಸ ಸಿನಿಮಾವೊಂದು ಅನೌನ್ಸ್ ಆಗಿದ್ದು, ಅದು ಕನ್ನಡದಲ್ಲೂ ಬಿಡುಗಡೆಯಾಗುತ್ತಿರುವುದಾಗಿ ಹೇಳಿದ್ದಾರೆ. ಈಗಾಗಲೇ ವಾರಿಯರ್ ಲುಕ್ ನಲ್ಲಿರುವ ಪೋಸ್ಟರ್ ಬಿಡುಗಡೆಯಾಗಿದ್ದು, ನೆಟ್ಟಿಗರು ಫಿದಾ ಆಗಿದ್ದಾರೆ.