Publish Date: Tue, 20 Feb 2018 (09:57 IST)
Updated Date: Tue, 20 Feb 2018 (09:59 IST)
ಕೊಚ್ಚಿ: ಕಣ್ಸನ್ನೆ ಹಾಡಿನ ಮೂಲಕ ಇಡೀ ಜಗತ್ತಿನ ಗಮನ ಸೆಳೆದಿದ್ದ ಮಲಯಾಳಂ ಸಿನಿಮಾ ಒರು ಆಧಾರ್ ಲವ್ ಸಿನಿಮಾ ನಟಿ ಪ್ರಿಯಾ ಪ್ರಕಾಶ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಿಯಾಳ ಈ ಹಾಡಿನ ವಿರುದ್ಧ ಹೈದರಾಬಾದ್ ನಲ್ಲಿ ಮುಸ್ಲಿಂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮತ್ತು ಚಿತ್ರತಂಡದ ಮೇಲೆ ದಾಖಲಾಗಿರುವ ಕ್ರಿಮಿನಲ್ ಆರೋಪ ಕೈ ಬಿಡುವಂತೆ ಕೋರಿ ಪ್ರಿಯಾ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ಇದರ ವಿಚಾರಣೆಯನ್ನು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಪ್ರಿಯಾ ವಿರುದ್ಧ ದೂರು ದಾಖಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ