Webdunia - Bharat's app for daily news and videos

Install App

ಭಾಜೀರಾವ್ ಸಿನಿಮಾದ ಪ್ರಚಾರದಲ್ಲಿ ತೊಡಗಲಿರುವ ಪ್ರಿಯಾಂಕ ಛೋಪ್ರಾ

Webdunia
ಶನಿವಾರ, 28 ನವೆಂಬರ್ 2015 (10:46 IST)
ಬಾಲಿವುಡ್‌ನ ಬಹು ನಿರೀಕ್ಷಿತ ಸಿನಿಮಾ ಭಾಜೀರಾವ್ ಮಸ್ತಾನಿ ಸಿನಿಮಾ ಡಿಸೆಂಬರ್ 18ರಂದು ರಿಲೀಸ್ ಆಗುತ್ತಿದೆ. ಈಗಾಗಲೇ ದೀಪಿಕಾ ಪಡುಕೋಣೆ ಹಾಗೂ ರಣ ವೀರ್ ಸಿಂಗ್ ಸಿನಿಮಾದ ಪ್ರಚಾರದಲ್ಲಿ  ತೊಡಗಿದ್ದಾರೆ.ಆದ್ರೆ ಸಿನಿಮಾದ ಪ್ರಮುಖ ಪಾತ್ರಧಾರಿಯಾದ ಪ್ರಿಯಾಂಕ ಛೋಪ್ರಾ ಮಾತ್ರ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರಲಿಲ್ಲ. ಆದ್ರೀಗ ಪ್ರಿಯಾಂಕ ಸಿನಿಮಾದ ಪ್ರಮೋಷನಲ್ ಕೆಲಸದಲ್ಲಿ ಭಾಗಿಯಾಗಲಿದ್ದಾರೆ.
 
ಅಮೇರಿಕಾದಲ್ಲಿ ಕ್ವಾಂಟಿಕೋ ಟಿವಿ ಶೋದಲ್ಲಿ ಬ್ಯುಸಿಯಾಗಿರುವ ಪಿಗ್ಗಿ ಇದೀಗ ಕೊಂಚ ಬಿಡುವು ಮಾಡಿಕೊಂಡು ಮುಂಬೈಗೆ ಆಗಮಿಸುತ್ತಿದ್ದಾರೆ.ಒಂದು ದಿನದ ಮುಂಬೈನಲ್ಲಿರುವ ಪ್ರಿಯಾಂಕ ಸಿನಿಮಾದ ಪ್ರಚಾರ ಕಾರ್ಯದಲ್ಲಿ ದೀಪಿಕಾ ಹಾಗೂ ರಣ್ ವೀರ್ ಸಿಂಗ್ ಅವರಿಗೆ ಸಾಥ್ ನೀಡಲಿದ್ದಾರೆ. ಇನ್ನು ಪಿಗ್ಗಿ ಬ್ಯುಸಿಯಾಗಿರೋದರಿಂದ ಮತ್ತೆ ಅಮೇರಿಕಾಗೆ ವಾಪಸ್ ಹೋಗಲಿದ್ದು, ಡಿಸೆಂಬರ್ ನಲ್ಲಿ ಮತ್ತೆ ಬಂದು ಪ್ರಮೋಷನಲ್ ಕೆಲಸದಲ್ಲಿ ತೊಡಗಲಿದ್ದಾರೆ.
 
ಸಿನಿಮಾದಲ್ಲಿ ದೀಪಿಕಾ, ರಣ್ ವೀರ್ ಸಿಂಗ್ ಹಾಗೂ ಪ್ರಿಯಾಂಕ ಛೋಪ್ರಾ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಸಿನಿಮಾವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಡಿಸೆಂಬರ್ 18 ರಂದು ಸಿನಿಮಾ ರಿಲೀಸ್ ಆಗಲಿದ್ದು, ಅದೇ ದಿನ ಶಾರುಖ್ ಹಾಗೂ ಕಾಜೋಲ್ ಅಭಿನಯದ ದಿಲ್ ವಾಲೇ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments