Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸರ್ಕಾರಿ ಶಾಲೆಯಲ್ಲಿ ಪಾಠ ಮಾಡಲಿದ್ದಾರೆ ಪ್ರಿಯಾಂಕ ಉಪೇಂದ್ರ!

webdunia
ಮಂಗಳವಾರ, 12 ಅಕ್ಟೋಬರ್ 2021 (10:06 IST)
ಬೆಂಗಳೂರು: ಮದುವೆಯಾದ ಬಳಿಕ ಹಲವು ಮಹಿಳಾ ಪ್ರಧಾನ, ಸದಭಿರುಚಿಯ ಪಾತ್ರಗಳಲ್ಲಿ ಮಿಂಚುತ್ತಿರುವ ನಟಿ ಪ್ರಿಯಾಂಕ ಉಪೇಂದ್ರ ಈಗ ಮತ್ತೊಂದು ವಿಭಿನ್ನ ಪಾತ್ರದೊಂದಿಗೆ ಜನರ ಎದುರಿಗೆ ಬರಲು ಸಿದ್ಧವಾಗಿದ್ದಾರೆ.


ಪ್ರಿಯಾಂಕ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ‘ಮಿಸ್ ನಂದಿನಿ’ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ ನೀಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾಂಕ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಈ ಸಿನಿಮಾಗೆ ಗುರುದತ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪ್ರಿಯಾಂಕ ಜೊತೆಗೆ ಅಪರ್ಣಾ, ಕೆ.ಪಿ. ಶ್ರೀಧರ್, ಸೂರಜ್ ಮುಂತಾದವರು ಪಾತ್ರ ಮಾಡುತ್ತಿದ್ದಾರೆ. ಮುಂದಿನ ವರ್ಷ ಚಿತ್ರ ತೆರೆಗೆ ಬರುವ ನಿರೀಕ್ಷೆಯಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ರಾಕಿ ಭಾಯ್ ಯಶ್ ಹೇರ್ ಸ್ಟೈಲ್ ಗೆ ಹೊಸ ರೂಪ