Select Your Language

Notifications

webdunia
webdunia
webdunia
webdunia

ಪುನೀತ್ ರಾಜ್ ಕುಮಾರ್ ನಿರ್ಮಾಣದ ಮೂರು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್

ಪುನೀತ್ ರಾಜ್ ಕುಮಾರ್ ನಿರ್ಮಾಣದ ಮೂರು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್
ಬೆಂಗಳೂರು , ಶನಿವಾರ, 22 ಜನವರಿ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಪಿಆರ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ ಮೂರು ಸಿನಿಮಾಗಳು ಒಟಿಟಿ ಫ್ಲ್ಯಾಟ್ ಫಾರಂ ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿವೆ.

ಪುನೀತ್ ನಿಧನಕ್ಕೂ ಮುನ್ನ ಮೂರು ಸಿನಿಮಾಗಳಿಗೆ ಬಂಡವಾಳ ಹಾಕಿದ್ದರು. ಫ್ಯಾಮಿಲಿ ಪ್ಯಾಕ್, ಒನ್ ಕಟ್ ಟು ಕಟ್ ಮತ್ತು ಮ್ಯಾನ್ ಆಫ್ ದಿ ಮ್ಯಾಚ್. ಈ ಮೂರೂ ಸಿನಿಮಾಗಳು ಪ್ರೈಮ್ ವಿಡಿಯೋದಲ್ಲಿ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಈ ಮೂರೂ ಸಿನಿಮಾ ಮೂಲಕ ಪುನೀತ್ ರಾಜ್ ಕುಮಾರ್ ಅವರ ಕನಸನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಈ ಮೂರೂ ಸಿನಿಮಾಗಳು ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ ಎಂದು ಪಿಆರ್ ಕೆ ಪ್ರೊಡಕ್ಷನ್ಸ್ ಪ್ರಕಟಣೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಪ್ರಿಯಾಂಕ ಚೋಪ್ರಾ ದಂಪತಿ