Publish Date: Mon, 14 Jun 2021 (09:57 IST)
Updated Date: Mon, 14 Jun 2021 (09:58 IST)
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಈಗ ಮತ್ತೊಂದು ಸಾವಿನ ಆಘಾತ ಎದುರಾಗಿದೆ. ಹಿರಿಯ ನಿರ್ಮಾಪಕ, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಕೆಸಿಎನ್ ಚಂದ್ರಶೇಖರ್ ಕೊನೆಯುಸಿರೆಳೆದಿದ್ದಾರೆ.
ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಚಂದ್ರಶೇಖರ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಶಿವಾನಂದ ಸರ್ಕಲ್ ಬಳಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಡಾ.ರಾಜ್ ಅಭಿನಯದ ಹುಲಿಯ ಹಾಲಿನ ಮೇವು, ಬಬ್ರುವಾಹನ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದರು. ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಒಮ್ಮೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್ ವುಡ್ ಸಂತಾಪ ವ್ಯಕ್ತಪಡಿಸಿದೆ.