Publish Date: Tue, 05 Jul 2022 (14:25 IST)
Updated Date: Tue, 05 Jul 2022 (14:28 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ನಿರ್ಮಾಪಕರಾಗಿದ್ದ ಕಿಶೋರ್ ಪತ್ತಿಕೊಂಡಗೆ ಸ್ಟ್ರೋಕ್ ಆಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಸದ್ಯಕ್ಕೆ ಕಿಶೋರ್ ಪತ್ತಿಕೊಂಡ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಏರಿಕೆಯಾಗಿದ್ದರಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದರು.
ಮೆದುಳಿನಲ್ಲಿ ಸಣ್ಣ ಮಟ್ಟಿಗೆ ರಕ್ತಸ್ರಾವವಾಗಿದ್ದು, ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.