ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸೇರಿದಂತೆ ಹಲವು ಕನ್ನಡ ಸಿನಿಮಾಗಳಿಗೆ ನಿರ್ಮಾಪಕರಾಗಿರುವ ಸೂರಪ್ಪ ಬಾಬು ಅವರ ಕಾರು ಅಪಘಾತಕ್ಕೀಡಾಗಿದೆ.
ತಮಿಳುನಾಡಿನ ಬ್ರಹ್ಮ ದೇವಸ್ಥಾನಕ್ಕೆ ಇನ್ನೋವಾ ಕಾರಿನಲ್ಲಿ ಕುಟುಂಬ ಸಮೇತರಾಗಿ ಸೂರಪ್ಪ ಬಾಬು ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತಕ್ಕೀಡಾಗಿದೆ.
ಸೂರಪ್ಪ ಬಾಬು ಕಾಲಿಗೆ ಕೊಂಚ ಏಟಾಗಿದ್ದು, ಉಳಿದವರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.